ದುಬಾರಿ ಬೆಲೆಯ ಬಿಎಂಡಬ್ಲ್ಯೂ ಕಾರನ್ನು ಕಾವೇರಿ ನದಿಯಲ್ಲಿ ಮುಳುಗಿಸಿ ವ್ಯಕ್ತಿಯೊಬ್ಬ ನಾಪತ್ತೆಯಾದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ನಿಮಿಷಾಂಭ ದೇವಸ್ಥಾನದ ಬಳಿ ನಡೆದಿದೆ. ಶ್ರೀರಂಗಪಟ್ಟಣದ ಗಂಜಾಂನ ನಿಮಿಷಾಂಭ ದೇವಸ್ಥಾನದ ಕಾವೇರಿ ನದಿಯಲ್ಲಿ ಕಾರು ಮುಳುಗಿರುವುದನ್ನು ಕಂಡು ಆಶ್ಚರ್ಯಗೊಂಡ ಸ್ಥಳೀಯರು ಶ್ರೀರಂಗಪಟ್ಟಣ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ನದಿಯಲ್ಲಿ ಇದ್ದ ಕಾರನ್ನು ಹೊರಕ್ಕೆ ತೆಗೆದಿದ್ದಾರೆ. ಶ್ರೀರಂಗಪಟ್ಟಣದ ಪಟ್ಟಣ ಪೊಲೀಸ್ ಠಾಣೆಗೆ ಕಾರನ್ನು ತೆಗೆದುಕೊಂಡು ಹೋದ ಪೊಲೀಸರು