ವಿಚ್ಚೇದಿತ ಪತ್ನಿಯ ಮೇಲೆ ಸೇಡು ತೀರಿಸಿಕೊಳ್ಳಲು ಆಕೆಯ ಫೋಟೋ ಮತ್ತು ಪ್ರೋಫೈಲ್ನ್ನು ಮ್ಯಾಟ್ರಿಮೋನಿಯಲ್ ಮತ್ತು ಡೇಟಿಂಗ್ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದ 31 ವರ್ಷ ವಯಸ್ಸಿನ ಸಾಫ್ಟ್ವೇರ್ ಇಂಜಿನಿಯರ್ನನ್ನು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ. ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಪ್ರತಿಷ್ಠಿದ ಐಟಿ ಕಂಪೆನಿಯೊಂದರಲ್ಲಿ ಹಿರಿಯ ಸಾಫ್ಟ್ವೇರ್ ಇಂಜಿನಿಯರ್ ಹುದ್ದೆಯಲ್ಲಿರುವ ಹರ್ಷವರ್ಧನ್ ಭಟ್ ಎನ್ನುವ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪೊಲೀಸ್ ಮೂಲಗಳ ಪ್ರಕಾರ, ಹರ್ಷವರ್ಧನ್