ಬೆಂಗಳೂರು : ರಾಷ್ಟ್ರ ರಾಜಧಾನಿ ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕನೊಬ್ಬ ಕಂಠಪೂರ್ತಿ ಕುಡಿದು ನಶೆಯಲ್ಲಿ ಹುಚ್ಚಾಟ ಮೆರೆದಿದ್ದಾನೆ. ವಿಮಾನ ಹಾರಾಟದ ವೇಳೆಯೇ ತುರ್ತು ನಿರ್ಗಮನ ದ್ವಾರವನ್ನು ತೆರೆಯಲು ಪ್ರಯತ್ನಿಸಿದ ವ್ಯಕ್ತಿಯ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ. ವರದಿಗಳ ಪ್ರಕಾರ ಘಟನೆ ಶುಕ್ರವಾರ ಬೆಳಗ್ಗೆ 7:56ರ ವೇಳೆಗೆ ವಿಮಾನ ಸಂಖ್ಯೆ 6ಇ 308 ರಲ್ಲಿ ನಡೆದಿದೆ. ಆರೋಪಿಯನ್ನು ಪ್ರತೀಕ್ (40) ಎಂದು ಗುರುತಿಸಲಾಗಿದೆ. ಆತ ಕಂಠಪೂರ್ತಿ ಮದ್ಯಪಾನ ಮಾಡಿ