ಚಿತ್ರದುರ್ಗ : ದೆವ್ವ ಬಿಡಿಸುವ ನೆಪದಲ್ಲಿ 2 ವರ್ಷದ ಹೆಣ್ಣುಮಗುವನ್ನು ಮಾಂತ್ರಿಕನೊಬ್ಬ ಬೆತ್ತದಿಂದ ಹೊಡೆದು ಕೊಂದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಅಜ್ಕಿಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಗು ಪದೇ ಪದೇ ಬೆಚ್ಚಿ ಬೀಳುತ್ತಿದ್ದ ಹಿನ್ನಲೆಯಲ್ಲಿ ಊರಿನ ಮಂತ್ರವಾದಿಯ ಬಳಿ ಕರೆದುಕೊಂಡು ಹೋಗಿದ್ದಾರೆ. ಆಗ ಆ ಮಂತ್ರವಾದಿ ಮಗುವಿಗೆ ದೆವ್ವ ಹಿಡಿದಿದೆ ಎಂದು ಎಕ್ಕೆಗಿಡದ ಬೆತ್ತದಿಂದ ಹೊಡೆದಿದ್ದಾನೆ. ಇದರ ಪರಿಣಾಮ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ.ತಕ್ಷಣ ಪೋಷಕರಿಗೆ ಮಗುವನ್ನು ಆಸ್ಪತ್ರೆಗೆ ದಾಖಲಿಸಲು