ಬೆಂಗಳೂರು: 2018ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದೆ. ಈ ನಿಟ್ಟಿನಲ್ಲಿ ನಾಳೆಯಿಂದ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮ ಹಮ್ಮಿಕೊಂಡಿದೆ. ಮಾರತ್ತಹಳ್ಳಿ ಸಮೀಪದ ರಾಮಗೊಂಡನಹಳ್ಳಿ ಶಾಲಾ ಮೈದಾನದಲ್ಲಿ ನಾಳೆ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮ ಆಯೋಜಿಸಲಾಗಿದ್ದು, ಪರಮೇಶ್ವರ್ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದರು. ಬಳಿಕ ಮಾತನಾಡಿದ ಅವರು, ನಾಳೆ 11ಗಂಟೆಗೆ ಕೆಪಿಸಿಸಿ ವತಿಯಿಂದ ಮಹದೇವಪುರ ಕ್ಷೇತ್ರದಲ್ಲಿ ಪ್ರಥಮ ಬಾರಿಗೆ ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮ ಆರಂಭವಾಗಲಿದೆ. ನಾಳೆ 224