ಬೆಂಗಳೂರಿನಲ್ಲಿ 74ನೇ ಗಣರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಣೆ ಮಾಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಬೆಂಗಳೂರು ಜಿಲ್ಲಾಡಳಿತ ಮಂಡಳಿ ನಿರ್ಧರಿಸಿದ್ದು, ಗಣರಾಜ್ಯೋತ್ಸವ ಆಚರಣೆಗೆ ನಗರದ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನ ಸಜ್ಜುಗೊಂಡಿದೆ. ಕಾರ್ಯಕ್ರಮದಲ್ಲಿ 8 ಸಾವಿರ ಮಂದಿ ಭಾಗಿಯಾಗುವ ನಿರೀಕ್ಷೆಗಳಿದ್ದು, ಎಲ್ಲೆಡೆ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ. ಗಣರಾಜ್ಯೋತ್ಸವ ಸಿದ್ಧತೆಗಳ ಕುರಿತು ನಗರ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಅವರು ಮಾಹಿತಿ ನೀಡಿದ್ದು, ಜನವರಿ 26 ರಂದು ನಡೆಯುವ