ಸಮಾಜದಲ್ಲಿ ಹಲವು ಸಮಸ್ಯೆಗಳನ್ನು ಎದುರಿಸುತ್ತಿರುವ ಮಡಿಕೇರಿ ನಿವಾಸಿ ರಿಹಾನ ಈ ಅನುಮತಿ ಕೋರಿದ್ದಾರೆ. ಈ ಬಗ್ಗೆ ಮಾತಾನಾಡಿರುವ ಅವರು, ಮಂಗಳಮುಖಿಯಾದ ಕಾರಣ ಸ್ಥಳೀಯರು ಮನೆ ಕೊಡಲು ನಿರಾಕರಣೆ ಮಾಡುತ್ತಿದ್ದಾರೆ. ಮನೆ ಖಾಲಿಯಿದ್ದರೂ ಇಲ್ಲ ಎನ್ನುತ್ತಾರೆ. ಲಾಡ್ಜ್ ಗಳಿಗೆ ದುಬಾರಿ ಮೊತ್ತದ ಬಾಡಿಗೆ ಹಣ ನೀಡಿ ಸಾಕಾಗಿದೆ. ಖರ್ಚು ವೆಚ್ಚಕ್ಕೆ ಅತಿಯಾದ ಸಮಸ್ಯೆ ಎದುರಾಗಿದೆ. ಕೊಡಗಿನ ಜಿಲ್ಲಾಧಿಕಾರಿಗಳಿಗೆ ಹಲವು ಬಾರಿ ಅರ್ಜಿ ಸಲ್ಲಿಸಿದರೂ ಕೂಡ ಯಾವುದೇ ಪ್ರಯೋಜನವಾಗಲಿಲ್ಲ ಎಂದು ತಮ್ಮ ಅಸಹಾಯಕತೆಯನ್ನು