ಮಂಗಳೂರಿನಲ್ಲಿ ನಡೆಸಲು ಉದ್ದೇಶಿಸಿರುವ ಕೋಮು ಸೌಹಾರ್ದ ರ್ಯಾಲಿಯಲ್ಲಿ ಕೇರಳ ಸಿಎಂ ಪಿಣರಾಯಿ ವಿಜಯನ್ ಭಾಗವಹಿಸುವಿಕೆಯನ್ನ ವಿರೋಧಿಸಿ ಸಂಘ ಪರಿವಾರದ ಸಂಘಟನೆಗಳು ಇವತ್ತು ದಕ್ಷಿಣ ಕನ್ನಡ ಜಿಲ್ಲಾ ಬಂದ್`ಗೆ ಕರೆ ನೀಡಿವೆ.ಹೀಗಾಗಿ, ಬೆಳಗ್ಗೆಯಿಂದಲೇ ಜಿಲ್ಲೆ ಸ್ತಬ್ಧವಾಗಿದೆ. ಖಾಸಗಿ ಬಸ್ ಸಂಚಾರ ಸ್ಥಗಿತವಾಗಿದ್ದು, ವಾಹನಗಳ ಸಂಚಾರ ವಿರಳವಾಗಿದೆ. ತಲಪಾಡಿ ಬಳಿ ಕೆಎಸ್ಆರ್ಟಿಸಿ ಬಸ್ ಮೇಲೆ ಕಲ್ಲು ತೂರಟ ನಡೆದಿದೆ. ಸಿಪಿಎಂ ಆಡಳಿತವಿರುವ ಕೇರಳದಲ್ಲಿ ಹಿಂದೂಗಳ ಹತ್ಯೆ ನಡೆಯುತ್ತಿದೆ ಎಂದು ಆರೋಪಿಸಿ ಬಂದ್ ಕರೆ