ಮಂಗಳೂರು ಚಲೋ ಬೈಕ್ ರ್ಯಾಲಿಗೆ ಎಲ್ಲಾ ಸಿದ್ದತೆಗಳಾಗಿವೆ. ಯಾವುದೇ ಕಾರಣಕ್ಕೂ ಮಂಗಳು ಚಲೋ ಕೈಬಿಡುವುದಿಲ್ಲ. ಮಂಗಳೂರು ಚಲೋಗೆ ಯಾರಪ್ಪನ ಅಪ್ಪಣೆ ಬೇಕಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ ನಗರದ ಮಲ್ಲೇಶ್ವರಂ ಕಚೇರಿಯಲ್ಲಿ ನಡೆದ ರಾಜಕೀಯ ವ್ಯವಹಾರಗಳ ಸಮಿತಿಯಲ್ಲಿ ಮಾತನಾಡಿದ ಅವರು, ಮಂಗಳೂರು ಚಲೋ ಕಾರ್ಯಕ್ರಮವನ್ನು ಹತ್ತಿಕ್ಕಲು ಸರಕಾರ ಪ್ರಯತ್ನಿಸುತ್ತಿದೆ. ಆದರೆ,ಯಾವುದೇ ಕಾರಣಕ್ಕೂ ಮಂಗಳೂರು ಚಲೋ ಕೈ ಬಿಡುವುದಿಲ್ಲ ಎಂದು ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯರ ಪಾಪದ ಕೊಡ ತುಂಬಿದೆ.