ಕೋವಿಡ್ ಕಾರಣದಿಂದಾಗಿ ಹೆಚ್ಚು ಜನರನ್ನು ಆಹ್ವಾನಿಸದೇ, ಕುಟುಂಬದವರು ಹಾಗೂ ಕೆಲವು ಗೆಳೆಯರ ಸಮಕ್ಷಮದಲ್ಲಿ ನಿಶ್ಚಿತಾರ್ಥ ನಡೆದಿದೆ. ಮದುವೆಗೆ ಆಗಸ್ಟ್ 15ನೇ ತಾರೀಖು ದಿನಾಂಕ ನಿಗದಿಯಾಗಿದೆ. ಮಂಸೋರ ವೃತ್ತಿಜೀವನದ ಪಯಣದದಲ್ಲಿ ಮಾಧ್ಯಮ ಮಿತ್ರರು ಹಾಗೂ ಚಿತ್ರರಂಗದ ಹಲವಾರು ಸ್ನೇಹಿತರು ಭಾಗಿಯಾಗಿದ್ದರು. ಈ ಕಾರಣದಿಂದ ಮಾಧ್ಯಮಗಳ ಮೂಲಕವೇ ಅವರೆಲ್ಲರಿಗೂ ತಮ್ಮ ಮದುವೆ ನಿಶ್ಚಯವಾಗಿರುವ ಶುಭಸುದ್ದಿಯನ್ನು ಹಂಚಿಕೊಂಡಿದ್ದಾರೆ. 2014ರಲ್ಲಿ ಮಂಸೋರೆ ಮೊದಲು ನಿರ್ದೇಶಿಸಿದ ಹರಿವು ಚಿತ್ರಕ್ಕೆ ಉತ್ತಮ ಪ್ರಾದೇಶಿಕ ಚಿತ್ರ ರಾಷ್ಟ್ರಪ್ರಶಸ್ತಿ ಬಂದಿತ್ತು. ಹರಿವು