ಬೆಂಗಳೂರು : ಐಎಂಎ ಕಂಪೆನಿಯ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದ ಮುಖ್ಯ ಆರೋಪಿ ಮನ್ಸೂರ್ ಖಾನ್ ನನ್ನು ಬಂಧಿಸಿದ ಅಧಿಕಾರಿಗಳಿಗೆ ಇದೀಗ ಪ್ರಾಥಮಿಕ ವಿಚಾರಣೆ ನಡೆಸಿದ ವೇಳೆ ಮನ್ಸೂರ್ ಖಾನ್ ಸ್ಪೋಟಕ ಮಾಹಿತಿಯೊಂದನ್ನು ತಿಳಿಸಿದ್ದಾನೆ. ಜಾರಿ ನಿದೇಶನಾಲಯ(ಇಡಿ) ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದ ವೇಳೆ 1000ಕ್ಕೂ ಹೆಚ್ಚು ಕೋಟಿ ಮೌಲ್ಯದ ವ್ಯವಹಾರದ ರಹಸ್ಯ ವಿವರವನ್ನು ಇಡಿ ಅಧಿಕಾರಿಗಳು ಪಡೆದಿದ್ದಾರೆ ಎನ್ನಲಾಗಿದೆ. ಅಲ್ಲದೇ ಕೆಲವು ಪ್ರಭಾವಿಗಳಿಗೆ ಹಂಚಿಕೆಯಾಗಿರುವ ಐಎಂಎ ಲಾಭಾಂಶದ ಕುರಿತು ಮಾಹಿತಿ