ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಕಾಂಗ್ರೆಸ್ ಪಕ್ಷದ ಸುಮಾರು ಆರನೂರಕ್ಕೂ ಹೆಚ್ಚು ಮುಖಂಡರು ಹಾಗೂ ಮೂರು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಇಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಸಮಕ್ಷಮದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.ಬಿಡದಿಯ ತೋಟದಲ್ಲಿ ಬೆಳಗ್ಗೆ ಹೆಚ್.ಡಿ.ಕೋಟೆ ತಾಲೂಕಿನ ಹಿರಿಯ ಮುಖಂಡ ಕೃಷ್ಣನಾಯಕ್ ಮತ್ತು ಕುರುಬ ಸಮುದಾಯದ ಮುಖಂಡ ಯತೀಶ್ ಅವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷವನ್ನು ಸೇರಿದರು. ಬಳಿಕ ಮಾಜಿ ಮುಖ್ಯಮಂತ್ರಿಗಳ ಜತೆ ಪಕ್ಷದ ಕೇಂದ್ರ ಕಚೇರಿಗೆ ಆಗಮಿಸಿ, ಜೆಡಿಎಸ್