ರೈತರು ಜೀವನದಲ್ಲಿ ಬದಲಾವಣೆ ತರಬೇಕಾದರೆ ಅವರು ಸ್ವಾವಲಂಬಿಗಳಾಬೇಕು. ಹೀಗಾಗಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಬ್ಯಾಂಕ್ನಿಂದ ರೈತರಿಗಾಗಿ ಹಲವು ಯೋಜನೆಗಳನ್ನ ಜಾರಿ ಮಾಡಿದ್ದು, ರೈತರು ಹಾಗೂ ಮಹಿಳೆಯರು ಪ್ರಯೋಜನ ಪಡೆದುಕೊಳ್ಳಬೇಕು. ಹೀಗಂತ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ತಿಳಿಸಿದ್ದಾರೆ.ಆನೇಕಲ್ನ ಚಂದಾಪುರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ, ರೈತರು ಪ್ರತಿಯೊಂದಕ್ಕೂ ಪ್ರಕೃತಿ ಮೇಲೆ ಅವಲಂಬಿತವಾಗಿದ್ದು ಅತಿವೃಷ್ಟಿ -ಅನಾವೃಷ್ಟಿಗಳ ಮೂಲಕ ತೊಂದರೆ ಅನುಭವಿಸುವಂತಾಗಿದೆ. ಸರ್ಕಾರ ರೈತರ