ಪ್ರಧಾನಿ ನರೇಂದ್ರ ಮೋದಿಯವರ 72ನೇ ಜನ್ಮದಿನದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜನಾಥ್ ಸಿಂಗ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಅನೇಕ ಗಣ್ಯರು ಶುಭಾಶಯ ಕೋರಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವೀಟ್ ಮೂಲಕ ಪ್ರಧಾನಿ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದಂದು ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು ಎಂದು