ಬೆಂಗಳೂರು : ಇಂದಿನಿಂದ ಎಲ್ಲಾ ಆರೋಗ್ಯ ಸಿಬ್ಬಂದಿ ಮಾಸ್ಕ್ ಅನ್ನು ಕಡ್ಡಾಯವಾಗಿ ಧರಿಸಬೇಕು ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಸೂಚಿಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಊ3ಓ2 ನಿಂದ ದೇಶದಲ್ಲಿ ಸೋಂಕು ಹೆಚ್ಚಳವಾಗಿದೆ. ಅನೇಕರು ಗಾಬರಿಯಾಗಿದ್ದಾರೆ. ಹೀಗಾಗಿ ಉನ್ನತ ಮಟ್ಟದ ತಾಂತ್ರಿಕ ಸಲಹಾ ಸಮಿತಿ ಜೊತೆ ಸಭೆ ಮಾಡಿದೆವು. ಗಾಬರಿಯಾಗುವ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಹಾಗಂತ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಬೇಕು ಎಂದರು.ಮಾಸ್ಕ್ ಧರಿಸೋದು ಇತ್ತೀಚೆಗೆ ಕಡಿಮೆಯಾಗಿದೆ.