ಹಾಜರಾತಿ ಕೊರತೆ ಕಾರಣದಿಂದ ಪರೀಕ್ಷೆ ಬರೆಯಲು ಅವಕಾಶ ನೀಡಲು ನಿರಾಕರಿಸಿದ್ದಕ್ಕೆ ಪತ್ರಿಕೋದ್ಯಮ ವಿದ್ಯಾರ್ಥಿಗಳು ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಒಡ್ಡಿದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಕೆರಿಮತ್ತಿಹಳ್ಳಿಯಲ್ಲಿರುವ ಕರ್ನಾಟಕ ವಿಶ್ವವಿದ್ಯಾಲಯದ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಗುರುವಾರ ಈ ಘಟನೆ ನಡೆದಿದ್ದು, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಪದವಿ ಅಭ್ಯಸಿಸುತ್ತಿರುವ 9 ವಿದ್ಯಾರ್ಥಿಗಳಿಗೆ ಹಾಜರಿ ಕೊರತೆ ಇದ್ದುದರಿಂದ ಪರೀಕ್ಷೆ ಎದುರಿಸಲು ಅನುಮತಿಯನ್ನು ನಿರಾಕರಿಸಿ ಪ್ರವೇಶ ಪತ್ರವನ್ನು ನೀಡಿರಲಿಲ್ಲ. ಇದನ್ನು ಖಂಡಿಸಿ