ತುಮಕೂರು : ರಾಜ್ಯದ ಅನುದಾನಿತ ಶಾಲಾ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಾವಿರಾರು ಶಿಕ್ಷಕರು ಹಾಗೂ ನೌಕರರಿಗೆ ನಿಶ್ಚಿತ ಪಿಂಚಣಿ ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ, ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ನೇತೃತ್ವದಲ್ಲಿ ತುಮಕೂರು ಸಿದ್ದಗಂಗಾ ಮಠದಿಂದ ಬೆಂಗಳೂರು ಫ್ರೀಡಂ ಪಾರ್ಕ್ವರೆಗೂ ನಡೆಸುತ್ತಿರುವ ಬೃಹತ್ ಪಾದಯಾತ್ರೆ, ಪ್ರತಿಭಟನೆಗೆ ಶುಕ್ರವಾರ ಬೆಳಗ್ಗೆ ಸಿದ್ಧಗಂಗಾ ಮಠದ ಶ್ರೀಗಳಾದ ಸಿದ್ಧಲಿಂಗೇಶ್ವರ ಸ್ವಾಮೀಜಿ ಚಾಲನೆ ನೀಡಿದರು.ಪಿಂಚಣಿ ವಂಚಿತ