ಡಿಸಿಎಂ ಲಕ್ಷ್ಮಣ ಸವದಿಗೆ ಬಿಜೆಪಿ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡೋಕೆ ಟಿಕೆಟ್ ಮಾಡಬೇಕೆಂದು ಕಾರ್ಯಕರ್ತರು ಒತ್ತಾಯಿಸಿದ್ದರು. ಅಥಣಿ ಮತಕ್ಷೇತ್ರದಲ್ಲಿ ಲಕ್ಷ್ಮಣ ಸವದಿಗೆ ಟಿಕೆಟ್ ಕೊಡುವಂತೆ ಆಗ್ರಹಿಸಿ ಸವದಿ ಬೆಂಬಲಿಗರು ಕರೆ ನೀಡಿದ್ದ ಪ್ರತಿಭಟನೆ ರದ್ದುಗೊಂಡಿದೆ.ಪ್ರತಿಭಟನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಸಿಬ್ಬಂದಿ ನಿಯೋಜನೆಗೊಂಡಿದ್ದರು. ಒಂದು ಡಿ ಆರ್ ವ್ಯಾನ್, ಒಂದು ಕೆ ಎಸ್ ಆರ್ ಪಿ, ಒಂದು ಐ ಆರ್ ಬಿ ತಂಡ ಸೇರಿದಂತೆ 150 ಕ್ಕೂ ಹೆಚ್ಚು ಸಿಬ್ಬಂದಿ ಭದ್ರತೆ ಕೈಗೊಂಡಿದ್ದಾರೆ.