ಮಲೆ ಮಹದೇಶ್ವರದ ಅಭಿವೃದ್ಧಿಗೆ ಅಗತ್ಯವಿರುವ ವ್ಯವಸ್ಥೆಗಳನ್ನು ಒದಗಿಸಲು ಮಾಸ್ಟರ್ ಪ್ಲಾನ್ ರಚಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಲೆ ಮಹದೇಶ್ವರದಲ್ಲಿ ಮಹದೇಶ್ವರ ಪ್ರಾಧಿಕಾರದ ಸಭೆಯ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಬೆಟ್ಟಕ್ಕೆ ಭಕ್ತಾದಿಗಳು ಹೆಚ್ಚಾಗುತ್ತಿದ್ದು, ಪ್ರತಿದಿನ ಹತ್ತರಿಂದ ಇಪ್ಪತ್ತು ಸಾವಿರ ಜನ ಭೇಟಿ ನೀಡುತ್ತಾರೆ. ಅಮಾವಾಸ್ಯೆ, ಹುಣ್ಣಿಮೆಗಳಂದು , ವಾರಾಂತ್ಯಗಳಲ್ಲಿ ಇನ್ನೂ ಹೆಚ್ಚಾಗುತ್ತದೆ. ಆರು ಜಾತ್ರೆಗಳು ನಡೆಯುತ್ತವೆ, ಆಗ ಲಕ್ಷಾಂತರ ಜನ