ಚಾಮರಾಜನಗರ : ನಗರದ ಪ್ರಸಿದ್ಧ ಮಲೆಮಹದೇಶ್ವರ ಬೆಟ್ಟದ ಅಭಿವೃದ್ಧಿಗೆ ಅಗತ್ಯವಿರುವ ವ್ಯವಸ್ಥೆಗಳನ್ನು ಒದಗಿಸಲು ಮಾಸ್ಟರ್ ಪ್ಲಾನ್ ರಚಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ತಿಳಿಸಿದ್ದಾರೆ.ಬೊಮ್ಮಾಯಿ ಅವರು ಇಂದು ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಮಲೆಮಹದೇಶ್ವರದಲ್ಲಿ ಮಹದೇಶ್ವರ ಪ್ರಾಧಿಕಾರದ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಬೆಟ್ಟಕ್ಕೆ ಭಕ್ತಾದಿಗಳು ಹೆಚ್ಚಾಗಿ ಬರುತ್ತಿದ್ದು, ಪ್ರತಿದಿನ 10-20 ಸಾವಿರ ಜನರು ಭೇಟಿ ನೀಡುತ್ತಿದ್ದಾರೆ.ಅಮಾವಾಸ್ಯೆ, ಹುಣ್ಣಿಮೆ ದಿನಗಳಂದು, ವಾರಾಂತ್ಯಗಳಲ್ಲಿ ಇನ್ನೂ ಹೆಚ್ಚಾಗಿ ಬರುತ್ತಾರೆ. ಜಾತ್ರೆಗಳು