ಲಕ್ಷಾಂತರ ಭಕ್ತರ ಆರಾಧ್ಯ ದೈವರಾಗಿದ್ದ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಯಾನಾಗುಂದಿಯ ಶ್ರೀ ಶ್ರೀ ಶ್ರೀ ರೂಪರಹಿತ ಅಹಿಂಸಾ ಯೋಗೀಶ್ವರ ವೀರಧರ್ಮಜ ಮಾತಾ ಮಾಣಿಕೇಶ್ವರಿ ಅವರ ಅಂತ್ಯಸಂಸ್ಕಾರವು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು. ಯಾನಾಗುಂದಿಯ ದೇವಸ್ಥಾನದ ಆವರಣದಲ್ಲಿ ಭಕ್ತ ಸಮೂಹದ ಸಾಗರದ ಮಧ್ಯೆ ಶೈವ ಧರ್ಮದ ಪ್ರಕಾರ ಶಾಸ್ತ್ರೋಕ್ತವಾಗಿ ನಡೆಯಿತು.ನಾಡಿನ ಹರಗುರುಚರ ಮೂರ್ತಿಗಳ ಸಮ್ಮುಖದಲ್ಲಿ ಮತ್ತು ಶ್ರೀಶೈಲದ ಮಹಾಸ್ವಾಮೀಜಿಗಳ ನೇತೃತ್ವದಲ್ಲಿ ಅಂತ್ಯಸಂಸ್ಕಾರದ ವಿಧಿ-ವಿಧಾನಗಳು ನೆರವೇರಿಸಲಾಯಿತು. ಸೂರ್ಯನಂದಿ ಬೆಟ್ಟದ ವೀರ ಧರ್ಮಜ