ಬಿಬಿಎಂಪಿ ಮೇಯರ್, ಉಪಮೇಯರ್ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿರುವುದು ರಾಜಕೀಯ ಪಕ್ಷಗಳಲ್ಲಿ ಹೆಚ್ಚಿನ ಚಟುವಟಿಕೆ ಆರಂಭವಾಗಿದೆ. ಸೆಪ್ಟೆಂಬರ್ 28 ರಂದು ಮೇಯರ್, ಉಪಮೇಯರ್ ಹುದ್ದೆಗೆ ಚುನಾವಣೆಗೆ ನಡೆಯಲಿದೆ. ಬಿಬಿಎಂಪಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಕೂಟದ ಅಧಿಕಾರವಿದ್ದು, ಮುಂದಿನ ಅವಧಿಗೂ ಮೈತ್ರಿ ಮುಂದುವರಿಯಲಿದೆಯೇ ಎನ್ನುವುದನ್ನು ಕಾದು ನೋಡಬೇಕಾಗಿದೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮುಂದುವರಿಸುತ್ತಾರೆಯೋ ಅಥವಾ ಬಿಜೆಪಿಯೊಂದಿಗೆ ಮೈತ್ರಿಯಾಗಿ ಜೆಡಿಎಸ್ ಪಕ್ಷಕ್ಕೆ ಮೇಯರ್ ಹುದ್ದೆ ಕೊಡಿಸುತ್ತಾರೋ ಎನ್ನುವ