ಬಿಬಿಎಂಪಿ ನೂತನ ಮೇಯರ್ ಸಂಪತ್ರಾಜ್ ಮತ್ತು ಉಪಮೇಯರ್ ಪದ್ಮಾವತಿ ನರಸಿಂಹಮೂರ್ತಿ ಇಂದು ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ನಿವಾಸಕ್ಕೆ ಆಗಮಿಸಿದ ಮೇಯರ್ ಮತ್ತು ಉಪಮೇಯರ್ರನ್ನು ಬರಮಾಡಿಕೊಂಡ ದೇವೇಗೌಡರು, ಎರಡೂ ಪಕ್ಷಗಳ ನಾಯಕರು ಹೊಂದಾಣಿಕೆಯಿಂದ ಕಾರ್ಯನಿರ್ವಹಿಸಬೇಕು. ಇಲ್ಲವಾದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಕ್ಕೆ ಕೆಟ್ಟ ಹೆಸರು ಬರುತ್ತದೆ ಎಂದು ಕಿವಿಮಾತು ಹೇಳಿದರು. ಬಿಬಿಎಂಪಿಯಲ್ಲಿ ಸಮನ್ವಯ ಸಮಿತಿ ರಚಿಸುವಂತೆ ಕಾಂಗ್ರೆಸ್ ಮುಖಂಡರಿಗೆ ಹೇಳಿದ್ದೇನೆ. ಅವರು ಯಾವಾಗ