ಬೆಂಗಳೂರು, ಸೆ.9 : ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಬಾರದೆ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿರುವ ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಯವರೇ ಮೇಯರ್ ಸ್ಥಾನವನ್ನು ಅಲಂಕರಿಸಲಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಕುತೂಹಲ ಕೆರಳಿಸಿದ್ದಾರೆ. ಒಂದು ಕಡೆ ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿರುವಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಮಹತ್ವ ಪಡೆದುಕೊಂಡಿದೆ. ತಮ್ಮ ನಿವಾಸದಲ್ಲಿ