ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ನಿಟ್ಟಿನಲ್ಲಿ ಮೈತ್ರಿ ಪಕ್ಷಗಳು ಮತ್ತೊಮ್ಮೆ ಯಶಸ್ವಿಯಾಗಿದ್ದು, ಮೈಸೂರು ಪಾಲಿಕೆಯಲ್ಲಿ ಮೈತ್ರಿ ಪಕ್ಷಗಳು ಅಧಿಕಾರ ನಡೆಸಲಿವೆ. ಮೈಸೂರು ನಗರಪಾಲಿಕೆ ಮೇಯರ್ ಹಾಗೂ ಉಪ ಮೇಯರ್ ಆಯ್ಕೆಗೆ ನಡೆದ ಚುನಾವಣೆಯಲ್ಲಿ 11ನೇ ವಾರ್ಡಿನಿಂದ ಆಯ್ಕೆಯಾಗಿರುವ ಕಾಂಗ್ರೆಸ್ನ ಪುಷ್ಪಲತ ಜಗನ್ನಾಥ್ ನೂತನ ಮೇಯರ್ ಆಗಿ ಹಾಗೂ 31ನೇ ವಾರ್ಡಿನಿಂದ ಆಯ್ಕೆಯಾಗಿರುವ ಜೆಡಿಎಸ್ನ ಷಪೀ ಆಹ್ಮದ್ ಉಪಮೇಯರ್ ಆಗಿ ಆಯ್ಕೆಯಾದರು.ಮೇಯರ್ ಸ್ಥಾನಕ್ಕಾಗಿ ಕಾಂಗ್ರೆಸ್ನ ಪುಷ್ಪಲತಾ ಜಗನ್ನಾಥ್ ಹಾಗೂ ಉಪಮೇಯರ್ ಸ್ಥಾನಕ್ಕೆ