ರಾಜ್ಯದಿಂದ ಪ್ರತಿನಿಧಿಸುವ ಅಂತರರಾಷ್ಟ್ರೀಯ ಮತ್ತು ರಾಷ್ಟ್ರ ಮಟ್ಟದ ಕ್ರೀಡಾಪಟುಗಳಿಗೆ ನೆರವು ನೀಡುವುದಾಗಿ ಮೇಯರ್ ತಿಳಿಸಿದ್ದಾರೆ. ಬಿಬಿಎಂಪಿ ವತಿಯಿಂದ ಅಗತ್ಯ ಎಲ್ಲ ನೆರವನ್ನು ನೀಡಲಾಗುವುದು ಎಂದು ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ ಭರವಸೆ ನೀಡಿದ್ದಾರೆ.ಬೆಂಗಳೂರು ನಗರದ ಮಲ್ಲೇಶ್ವರಂ ಆಟದ ಮೈದಾನದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ನೌಕರರ ಕ್ಷೇಮಾಭಿವೃದ್ಧಿ ಆಯೋಜಿಸಿದ್ದ ರಾಜ್ಯ ಮಹಾನಗರ ಪಾಲಿಕೆಗಳ ನಡುವೆ ನಡೆದ ಅಂತರ ಪಾಲಿಕೆ ಥ್ರೋ ಬಾಲ್ ಪಂದ್ಯಾವಳಿಯನ್ನು ಥ್ರೋ ಬಾಲ್ ಎಸೆಯುವ ಮೂಲಕ ಉದ್ಘಾಟಿಸಿ