ವಿಜಯಪುರ: ನನ್ನ ವಿರುದ್ಧ ಯಾರು ಏನೇ ಮಾಡಿದರೂ, ತಲೆ ಕೆಳಗೆ ಮಾಡಿ ನಿಂತರೂ ಈ ಬಾರಿ ಚುನಾವಣೆಯಲ್ಲಿ ನನ್ನ ಗೆಲುವು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹರಿ ಹರ ಬ್ರಹ್ಮಾದಿಗಳು ಬಂದರೂ ನನ್ನ ಗೆಲುವು ತಡೆಯಲು ಸಾಧ್ಯವಿಲ್ಲ. ನಾನು 50 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇನೆ ನೋಡುತ್ತಿರಿ ಎಂದು ಸವಾಲು ಹಾಕಿದ್ದಾರೆ.ಇದೇ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್