ರಾಜ್ಯಾದ್ಯಂತ ಡೆಂಗ್ಯೂ ರೋಗ ಪ್ರಕರಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ. ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು ಏಳು ಸಾವಿರಕ್ಕೂ ಅಧಿಕ ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ. ಡೆಂಗ್ಯೂ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು. ಬೆಂಗಳೂರು