ಕೇಂದ್ರ ಸರ್ಕಾರದ ನೆರೆಹಾನಿ ಅಧ್ಯಯನ ತಂಡದ ಸದಸ್ಯರು ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿದ್ರು.ಪ್ರವಾಹ ಸಂತ್ರಸ್ತರಿಗೆ ಆದಷ್ಟು ಬೇಗನೇ ಪರಿಹಾರ ಬಿಡುಗಡೆ ಮಾಡುವುದು ನಮ್ಮ ಆದ್ಯತೆಯಾಗಿದೆ ಎಂದು ಕೇಂದ್ರ ಸರ್ಕಾರದ ನೆರೆಹಾನಿ ಅಧ್ಯಯನ ತಂಡದ ನೇತೃತ್ವ ವಹಿಸಿದ್ದ ಕೇಂದ್ರ ಗೃಹ ವ್ಯವಹಾರಗಳ ಇಲಾಖೆಯ ಆಡಳಿತ ವಿಭಾಗದ ಜಂಟಿ ನಿರ್ದೇಶಕರಾದ ಶ್ರೀ ಪ್ರಕಾಶ್ ತಿಳಿಸಿದ್ರು.ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಂಚರಿಸಿ ಹಾನಿಯನ್ನು ಪರಿಶೀಲಿಸಿದ ಬಳಿಕ, ಕಾಗವಾಡ ಸಮೀಪದ ಶೇಡಬಾಳ ಪ್ರವಾಸಿಮಂದಿರದಲ್ಲಿ