ರಾಜ್ಯದ ರೈತನ ಬದುಕು ಹಸನಾಗಿಸಲು ಕೃಷಿ ಪದ್ಧತಿಯಲ್ಲಿ ಅಮೂಲಾಗ್ರ ಬದಲಾವಣೆ ತರಲು ಮತ್ತು ಗ್ರಾಮೀಣ ಭಾಗದ ಯುವಸಮೂಹದ ಸಮಸ್ಯೆಗಳನ್ನು ಆಲಿಸಲು ಶೀಘ್ರದಲ್ಲಿಯೇ ರಾಜ್ಯದ ಪ್ರತಿ ಹೋಬಳಿಯಲ್ಲಿ ಜನಸ್ಪಂದನಾ ಸಭೆ ನಡೆಸಲಾಗುವುದೆಂದು ರಾಜ್ಯದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಿಸಿದ್ದಾರೆ.ಕಲಬುರಗಿ ನಗರದ ಹಳೆ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯ ಸಚಿವರು, ಶಾಸಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ನಡೆಸುವ ಈ ಸಭೆಗೆ ರೈತ ಮುಖಂಡರನ್ನು ಆಹ್ವಾನಿಸಿ ರೈತ ಸಮುದಾಯ ಆರ್ಥಿಕವಾಗಿ ಪ್ರಗತಿ ಸಾಧಿಸಲು