ಬಿಬಿಎಂಪಿ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಜೊತೆ ಮಾನ್ಯ ಮುಖ್ಯ ಕಾರ್ಯದರ್ಶಿಯವರ ನೇತೃತ್ವದಲ್ಲಿ ಸಮನ್ವಯ ಸಭೆ ನಡೆಸಲಾಗಿದೆ. ನಗರದ ಪ್ರಮುಖ 10 ಜಂಕ್ಷನ್ ಗಳಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುತ್ತಿದ್ದು, ತ್ವರಿತಗತಿಯಲ್ಲಿ ಜಂಕ್ಷನ್ ಗಳನ್ನು ಅಭಿವೃದ್ಧಿಪಡಿಸಲು ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿಯಾದ ಶ್ರೀಮತಿ ವಂದಿತಾ ಶರ್ಮಾ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.