ಹಾಲುಮತ ಸಮಾಜದವರನ್ನು ಎಸ್ ಟಿ ಮೀಸಲಾತಿಗೆ ಸೇರಿಸುವಂತೆ ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಕಾಗಿನೆಲೆ ಕನಕ ಗುರು ಪೀಠದಲ್ಲಿ ಸಮಾಜದ ಪೂರ್ವಾಭಾವಿ ಸಭೆ ನಡೆಸಲಾಯಿತು.ಕನಕ ಗುರು ಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಯವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 30 ಜಿಲ್ಲೆಯ ಸಮುದಾಯದ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀ ಗಳು, ಇಂದು ಎಲ್ಲಾ ಜಿಲ್ಲೆಯ ಸಮುದಾಯದ ಪದಾಧಿಕಾರಿಗಳ ಸಭೆಯನ್ನು ನಡೆಸಲಾಗಿದೆ. ಈ ಸಭೆಯಲ್ಲಿ ಹಾಲುಮತ ಸಮುದಾಯದವರನ್ನು