ಬೆಂಗಳೂರು : ವಿಧಾನಸಭೆ ಚುನಾವಣೆಯಷ್ಟೇ ಹೈಪ್ ಕ್ರಿಯೇಟ್ ಮಾಡಿದ್ದ 20 ಜಿಲ್ಲೆಗಳ 25 ಸ್ಥಾನಗಳ ವಿಧಾನಪರಿಷತ್ ಚುನಾವಣೆ ಮುಕ್ತಾಯವಾಗಿದೆ. ಮತಪೆಟ್ಟಿಗೆಯಲ್ಲಿ 90 ಅಭ್ಯರ್ಥಿಗಳ ಭವಿಷ್ಯ ಭದ್ರವಾಗಿದ್ದು, ಈಗ ಸೋಲು-ಗೆಲುವಿನ ಲೆಕ್ಕಾಚಾರ ಜೋರಾಗಿದ್ದು, ಡಿಸೆಂಬರ್ 14ರಂದು ಫಲಿತಾಂಶ ಪ್ರಕಟವಾಗಲಿದೆ.ಸುಗಮ ಚುನಾವಣೆಗಾಗಿ 20 ಜಿಲ್ಲೆಗಳಲ್ಲಿ 6,073 ಮತಗಟ್ಟೆಗಳನ್ನು ತೆರೆಯಲಾಗಿತ್ತು. ಸಣ್ಣ ಪುಟ್ಟ ಘಟನೆ ಹೊರತುಪಡಿಸಿದರೆ ಉಳಿದಂತೆ ಶಾಂತಿಯುತ ಮತದಾನ ನಡಿಯಿತು.ಹಾವೇರಿಯ ಶಿಗ್ಗಾಂವಿಯಲ್ಲಿ ಬಸವರಾಜ ಬೊಮ್ಮಾಯಿ, ಶಿಕಾರಿಪುರದಲ್ಲಿ ಯಡಿಯೂರಪ್ಪ, ಬಾದಾಮಿಯಲ್ಲಿ ಸಿದ್ದರಾಮಯ್ಯ, ಚನ್ನಪಟ್ಟಣದಲ್ಲಿ ಮಾಜಿ