ಕಲಬುರಗಿ : ಇಲ್ಲಿನ ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ಸಂಬಂಧಿಸಿ ಹಳೆ ಮತದಾರರ ಪಟ್ಟಿಯಂತೆ ಚುನಾವಣೆ ನಡೆಸಲು ಆದೇಶ ನೀಡಲಾಗಿದೆ.ಈ ಬಗ್ಗೆ ಕಾಂಗ್ರೆಸ್ ಅರ್ಜಿಯನ್ನು ಕಲಬುರಗಿ ಹೈಕೋರ್ಟ್ ಎತ್ತಿ ಹಿಡಿದಿದೆ. ಕಲಬುರಗಿ ಹೈಕೋರ್ಟ್ ನ್ಯಾ. ಇಂದರೇಶ್ ಪೀಠ ಆದೇಶ ನೀಡಿದೆ. ಹೈಕೋರ್ಟ್ ಆದೇಶದಿಂದ ಬಿಜೆಪಿ ನಾಯಕರಿಗೆ ಹಿನ್ನಡೆ ಉಂಟಾಗಿದೆ.63 ಮತದಾರರ ಪಟ್ಟಿಯಂತೆ ಚುನಾವಣೆ ನಡೆಸಲು ಆದೇಶ ನೀಡಲಾಗಿದೆ. ನವೆಂಬರ್ನಲ್ಲಿ ಹೊರಡಿಸಿದ್ದ ಮತದಾರರ ಪಟ್ಟಿಯಂತೆ ಚುನಾವಣೆ ನಡೆಸುವಂತೆ ಹೈಕೋರ್ಟ್ನಿಂದ ಸೂಚನೆ ಲಭಿಸಿದೆ.