ಸಂವಿಧಾನ ಬದಲಾವಣೆಗಾಗಿ ನಾವು ಬಂದಿದ್ದೇವೆ ಎಂದು ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಇಂದು ವಿಪಕ್ಷಗಳ ಒತ್ತಡಕ್ಕೆ ಮಣಿದು ಕ್ಷಮೆಯಾಚಿಸಿದ್ದಾರೆ. ಸಂಸತ್ತಿನಲ್ಲಿ ನಡೆದ ಕಲಾಪದಲ್ಲಿ ಅನಂತ್ ಕುಮಾರ್ ಹೆಗಡೆ, ನಾನು ಆ ರೀತಿ ಹೇಳಿಯೇ ಇಲ್ಲ. ಒಂದು ವೇಳೆ, ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾದಲ್ಲಿ ಕ್ಷಮೆಯಾಚಿಸುತ್ತೇನೆ ಎಂದು ತಿಳಿಸಿದ್ದಾರೆ. ಸಚಿವ ಹೆಗಡೆ ಹೇಳಿಕೆ ಕುರಿತಂತೆ ನಿನ್ನೆ ಸಂಸತ್ತಿನ ಕಲಾಪದಲ್ಲಿ ವಿಪಕ್ಷಗಳು ಕೋಲಾಹಲ ಸೃಷ್ಟಿಸಿದ್ದವು ಇಂದು ಕೂಡಾ