ಬೆಂಗಳೂರು : ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶ ವಿಚಾರಕ್ಕೆ ಸಂಬಂಧಿಸಿದಂತೆ ಕೇರಳ ಸರ್ಕಾರ ಹಿಂದೂಗಳ ಮೇಲೆ ಹಾಡಹಗಲೇ ಅತ್ಯಾಚಾರ ನಡೆಸಿದೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಹೇಳಿದ್ದಾರೆ. ಈ ಬಗ್ಗೆ ಸುದ್ದಿಸಂಸ್ಥೆಯ ಜೊತೆ ಮಾತನಾಡಿದ ಅವರು, ಕೇರಳ ಸಿಎಂ ಅಹಂಕಾರದಿಂದ ವರ್ತಿಸುತ್ತಿರುವುದರಿಂದಲೇ ಈ ಗೊಂದಲ ನಿರ್ಮಾಣವಾಗಿದೆ. ಸುಪ್ರಿಂ ಕೋರ್ಟ್ ತೀರ್ಪು ನೀಡಿದ್ದನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ ಕಾನೂನು ಮತ್ತು ಸುವ್ಯವಸ್ಥೆ ನೋಡಿಕೊಳ್ಳುವುದು ರಾಜ್ಯ ಸರ್ಕಾರದ ಜವಬ್ದಾರಿ.