ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ 7ನೇ ಬಾರಿಗೆ ನೋಟಿಸ್ ಜಾರಿ ಮಾಡಿದೆ. ನಾಳೆ ಮಧ್ಯಾಹ್ನ ವಿಚಾರಣೆಗಾಗಿ ಕುಟುಂಬ ಸಮೇತ ಆದಾಯ ತೆರಿಗೆ ಇಲಾಖೆ ಕಚೇರಿಗೆ ಹಾಜರಾಗುವಂತೆ ಐಟಿ ಅದಿಕಾರಿಗಳು ನೋಟಿಸ್ನಲ್ಲಿ ತಿಳಿಸಿದ್ದಾರೆ. ಆದಾಯ ತೆರಿಗೆ ಇಲಾಖೆ 7ನೇ ಬಾರಿಗೆ ನೋಟಿಸ್ ಜಾರಿಗೊಳಿಸಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಡಿ.ಕೆ.ಶಿವಕುಮಾರ್, ಐಟಿ ನೋಟಿಸ್ ಪಾಲಿಸುವುದು ನನ್ನ ಕರ್ತವ್ಯವಾಗಿದೆ.