ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒಳ್ಳೆಯ ಭವಿಷ್ಯ ನುಡಿಯುವವರು ಎಂದು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಟಾಂಗ್ ಮಾಡಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಅಹ್ಮದ್ ಪಟೇಲ್ ಗೆಲ್ಲಲು ಸಾಧ್ಯವಿಲ್ಲ ಎನ್ನುವ ಬಿ.ಎಸ್.ಯಡಿಯೂರಪ್ಪ ಹೇಳಿಕೆಗೆ ಸಚಿವರು ತಿರುಗೇಟು ನೀಡಿದ್ದಾರೆ. ಬಿಜೆಪಿಯವರು ಐದು ವರ್ಷ ಅಧಿಕಾರದಲ್ಲಿದ್ದಾಗ ಏನು ಮಾಡಿದರು ಎನ್ನುವುದು ಎಲ್ಲರಿಗೆ ಗೊತ್ತಿದೆ. ರೆಸಾರ್ಟ್ ರಾಜಕೀಯ ಮಾಡಿದ್ದೇ ಬಿಜೆಪಿಯವರು. ಯಾರನ್ನು ಎಲ್ಲಿಗೆ ಕರೆದುಕೊಂಡು ಹೋಗಿದ್ದರು. ಅದನ್ನೇ ನಾವು ಈಗ