ರಂಗಭೂಮಿಯ ಹಿರಿಯ ಜೀವಿ, ರಂಗ ನಿರಂತರ ಕಾರ್ಯಾಧ್ಯಕ್ಷರಾಗಿದ್ದ ಡಿ.ಕೆ.ಚೌಟ (82) ಜಯದೇವ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದು, ಅವರ ಅಗಲಿಕೆಗೆ ಜಲ ಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.ಹಿರಿಯ ರಂಗ ಸಂಘಟಕ ಡಿ.ಕೆ ಚೌಟ ಅವರ ನಿಧನವಾರ್ತೆ ಬೇಸರ ತಂದಿದೆ. ಉದ್ಯಮಿಯಾಗಿದ್ದರೂ ರಂಗಭೂಮಿ, ಸಾಹಿತ್ಯ ಹಾಗೂ ಕಲಾಸೇವೆಗೆ ತಮ್ಮನ್ನು ಸಮರ್ಪಿಸಿಕೊಂಡಿದ್ದ ಚೌಟ ಅವರು ವಿಶೇಷ ವ್ಯಕ್ತಿತ್ವ ಹೊಂದಿದ್ದವರು. ಆನಂದ ಕೃಷ್ಣ ಎಂಬ ಕಾವ್ಯನಾಮದಿಂದ ಖ್ಯಾತಿ ಪಡೆದಿದ್ದ ಅವರು,