ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಪ್ರಯತ್ನಿಸಿದ ಕಾರ್ಯಕರ್ತನಿಗೆ ಇಂಧನ ಸಚಿವ ಡಿ.ಕೆ.ಶಿವಕುಮಾರ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಕಾರ್ಯಕ್ರಮದ ಸಿದ್ಧತೆ ಪರಿಶೀಲನೆ ನಡೆಸಲು ಹೊಸಪೇಟೆಗೆ ಬಂದಿದ್ದರು. ಹೆಲಿಪ್ಯಾಡಿನಿಂದ ಬರುತ್ತಿದ್ದಂತೆ ಕಾರ್ಯಕರ್ತರು ಮುಗಿಬಿದ್ದರು. ಈ ವೇಳೆ ಕಾರ್ಯಕರ್ತರೊಬ್ಬರು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಇದನ್ನು ಕಂಡು ಕೆಂಡಮಂಡಲರಾದ ಸಚಿವ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವುದು ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದರೂ ಕಾರ್ಯಕರ್ತ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವುದು ನಿಲ್ಲಿಸದ ಕಾರಣ ಕಪಾಳಮೋಕ್ಷ ಮಾಡಿದ್ದಾರೆ. ತಾಜಾ ಸುದ್ದಿಗಳನ್ನು