ಕೂಡಲಸಂಗಮದ ಜಯಮೃತ್ಯುಂಜಯ ಸ್ವಾಮಿಗಳ ಹೇಳಿಕೆ ಸಮರ್ಥಿಸಿಕೊಳ್ಳುತ್ತಿರುವ ಸಚಿವ ಎಂ.ಬಿ.ಪಾಟೀಲ್ಗೆ ಬುದ್ದಿ ಭ್ರಮಣೆಯಾಗಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ವಾಗ್ದಾಳಿ ನಡೆಸಿದ್ದಾರೆ. ಜಯಮೃತ್ಯುಂಜಯ ಸ್ವಾಮಿಗಳು ಹಿಡಿತದಿಂದ ಮಾತನಾಡಿದ್ದರೆ ಇಂತಹ ಪರಿಸ್ಥಿತಿ ಉದ್ಭವಿಸುತ್ತಿರಲಿಲ್ಲ. ಶ್ರೀಗಳ ಹೇಳಿಕೆಯಿಂದ ತುಂಬಾ ಅಸಮಾಧಾನವಾಗಿದೆ ಎಂದು ತಿಳಿಸಿದ್ದಾರೆ. ಇದೀಗ ಶ್ರೀಗಳ ಹೇಳಿಕೆಯನ್ನು ತಿರುಚಲಾಗುತ್ತಿದೆ. ನಾಲ್ಕಾರು ಜನರು ಸೇರಿಕೊಂಡು ಈ ರೀತಿ ಮಾಡುತ್ತಿದ್ದಾರೆ. ಹೊಸದಾಗಿ ಲಿಂಗಾಯುತ ಎನ್ನುವ ಬಿರುದು ಪಡೆದುಕೊಳ್ಳಲು ಇಂತಹ ವರ್ತನೆ