Widgets Magazine

ಕೊರೊನಾ ಕಂಟೈನ್‌ಮೆಂಟ್ ಜೋನ್ ಗೆ ಎಂಟ್ರಿಕೊಟ್ಟ ಸಚಿವ

ಮೈಸೂರು| Jagadeesh| Last Modified ಬುಧವಾರ, 1 ಏಪ್ರಿಲ್ 2020 (19:11 IST)
ಕೊರೊನಾ ಪ್ರಕರಣ ಹೆಚ್ಚಾದ ಹಿನ್ನೆಲೆಯಲ್ಲಿ ಘೋಷಣೆ ಮಾಡಿರುವ ಕಂಟೈನ್ ಮೆಂಟ್ ಜೋನ್ ಗೆ ಸಚಿವರೊಬ್ಬರು ಎಂಟ್ರಿಕೊಟ್ಟಿದ್ದಾರೆ.

ನಂಜನಗೂಡು ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಕಂಟೈನ್‌ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ಇದರಿಂದ ಇಲ್ಲಿನ ಜನರು ಆತಂಕಗೊಂಡಿದ್ದಾರೆ. ಆದರೆ, ಮೈಸೂರು ಜಿಲ್ಲಾ ಉಸ್ತುವಾರಿ ಈ ಪ್ರದೇಶಗಳಿಗೆ ತೆರಳಿ ಪರಿಸ್ಥಿತಿ ಅವಲೋಕನೆ ಮಾಡಿ, ಜನರು ಆತಂಕ ಪಡುವ ಅಗತ್ಯವಿಲ್ಲ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಸಂದೇಶ ರವಾನಿಸಿದ್ದಾರೆ.

ಕಡಕೊಳ ಕೈಗಾರಿಕಾ ಪ್ರದೇಶ, ಸಿಂಧುವಳ್ಳಿ ಗೇಟ್, ನಂಜನಗೂಡು ಟೌನ್, ಶ್ರೀಕಂಠೇಶ್ವರ ದೇವಸ್ಥಾನದ ದಾಸೋಹ ಭವನ ಮುಂತಾದ ಸ್ಥಳಗಳಿಗೆ ಭೇಟಿ ನೀಡಿ ಜಿಲ್ಲಾಡಳಿತ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮವನ್ನು ಖುದ್ದಾಗಿ ಪರಿಶೀಲಿಸಿದರು. ಪರಿಶೀಲನೆ ಸಂದರ್ಭದಲ್ಲಿ ಸುರಕ್ಷಿತ ಕ್ರಮವಾಗಿ ಮಾಸ್ಕ್ ಧರಿಸಿದ್ದರು.‌ ಜಿಲ್ಲಾಧಿಕಾರಿಗಳು ಹಾಗೂ ವೈದ್ಯರ ಸಲಹೆಯಂತೆ ನಡೆದುಕೊಂಡರು.


 
ಇದರಲ್ಲಿ ಇನ್ನಷ್ಟು ಓದಿ :