ಶ್ರೀಮಂತ ಮಠಗಳಿಗೆ ಹಣ ನೀಡಲು ಸಾಧ್ಯವಿಲ್ಲ:ಈಶ್ವರಪ್ಪಗೆ ಸಚಿವ ಅಂಜನೇಯ ತಿರುಗೇಟು

ಕಲಬುರ್ಗಿ| Vinod| Last Modified ಸೋಮವಾರ, 23 ಜನವರಿ 2017 (15:51 IST)
ಸಾಮಾಜಿಕ ಕಳಕಳಿಯುಳ್ಳ ಮಠಗಳಿಗೆ ಮಾತ್ರ ಕಾಂಗ್ರೆಸ್ ಸರಕಾರ ಹಣ ಬಿಡುಗಡೆ ಮಾಡುತ್ತದೆ. ಶ್ರೀಮಂತ ಮಠಗಳಿಗೆ ಹಣ ನೀಡಲು ಸಾಧ್ಯವಿಲ್ಲ ಎಂದು ವಿಧಾನ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪರಿಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಟಾಂಗ್ ನೀಡಿದ್ದಾರೆ.
ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರ ತೆರಿಗೆ ಹಣವನ್ನು ಬೇಕಾಬಿಟ್ಟಿ ಖರ್ಚು ಮಾಡಲು ಸಾಧ್ಯವಿಲ್ಲ. ರಾಜ್ಯ ಸರಕಾರ ಮಠಗಳಿಗೆ ಯಾವುದೇ ಹಣ ಬಿಡುಗಡೆ ಮಾಡಿಲ್ಲ ಎಂದಿರುವ ಹೇಳಿಕೆಯಲ್ಲಿ ಯಾವುದೇ ಹುರಳಿಲ್ಲ ಎಂದು ಕಿಡಿಕಾರಿದರು.


ರಾಜ್ಯ ಸರಕಾರ ಶ್ರೀಮಂತ ಮಠಗಳಿಗೆ ಹಣ ನೀಡುವುದಿಲ್ಲ. ಅಂತಹ ಮಠಗಳಿಗೆ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಕಾಣಿಕೆ ನೀಡುತ್ತಾರೆ. ನಮ್ಮದೇನಿದ್ದರೂ ಬಡ ಹಾಗೂ ಸಾಮಾಜಿಕ ಕಳಕಳಿಯುಳ್ಳ ಮಠಗಳ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡುವುದು ಎಂದು ತಿಳಿಸಿದರು.

ಮುಂಬರುವ ವಿಧಾನಸಭೆ ಚುನಾವಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯರ ನೇತೃತ್ವದಲ್ಲಿಯೇ ಎದುರಿಸುತ್ತೇವೆ. ಚುನಾವಣೆ ನಂತರ ದಲಿತ ಸಿಎಂ ವಿಚಾರದ ಬಗ್ಗೆ ಚರ್ಚೆ ಮಾಡೋಣ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಆಂಜನೇಯ ತಿಳಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ

ಮೊಬೈಲ್ ಆ್ಯಪ್
ಡೌನ್‍ಲೋಡ್ ಮಾಡಿಕೊಳ್ಳಿ.


ಇದರಲ್ಲಿ ಇನ್ನಷ್ಟು ಓದಿ :