ಮುಂದಿನ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯರನ್ನು ಸೋಲಿಸುವುದೇ ಗುರಿ ಎಂದಿರುವ ಬಿಜೆಪಿ ಮುಖಂಡ ವಿ.ಶ್ರೀನಿವಾಸ್ ಪ್ರಸಾದ್ಗೆ ಸಾರಿಗೆ ಖಾತೆ ಸಚಿವ ಎಚ್.ಎಂ.ರೇವಣ್ಣ ತರಾಟೆಗೆ ತೆಗೆದುಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯರನ್ನು ಸೋಲಿಸುವುದು, ಗೆಲ್ಲಿಸುವುದು ಮತದಾರರಿಗೆ ಬಿಟ್ಟ ವಿಷಯವಾಗಿದೆ. ಮತದಾರರು ಮನಸ್ಸು ಮಾಡಿದಲ್ಲಿ ಗೆಲ್ಲಿಸುತ್ತಾರೆ, ಇಲ್ಲವೇ ಸೋಲಿಸುತ್ತಾರೆ ಎಂದರು. ಸಿಎಂ ಸಿದ್ದರಾಮಯ್ಯರನ್ನು ಸೋಲಿಸುವ ತವಕದಲ್ಲಿರುವ ಶ್ರೀನಿವಾಸ್ ಪ್ರಸಾದ್ ಯಾಕೆ ನಂಜನಗೂಡು ಉಪ ಚುನಾವಣೆಯಲ್ಲಿ ಸೋತಿದ್ದಾರೆ ಎಂದು ಪ್ರಶ್ನಿಸಿದ ಅವರು, ವಿರೋಧ