ಪಡಿತರ ವಿತರಣೆ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ‘ ಪಶ್ಚಿಮ ಬಂಗಾಳದ ಕಾಂಗ್ರೆಸ್ನ ಮಾಜಿ ಆಹಾರ ಸಚಿವ ಹಾಗೂ ಹಾಲಿ ಅರಣ್ಯ ಸಚಿವ ಜ್ಯೋತಿಪ್ರಿಯ ಮಲ್ಲಿಕ್ ಅವರನ್ನು ಬಂಧಿಸಲಾಗಿದೆ.ಜಾರಿ ನಿರ್ದೇಶನಾಲಯವು ಕೊಲ್ಕತ್ತಾದ ಅವರ ಮನೆಯಲ್ಲಿ 20 ಗಂಟೆಗಳ ಕಾಲ ಸುದೀರ್ಘ ದಾಳಿ ನಡೆಸಿದ ಬಳಿಕ ಜ್ಯೋತಿಪ್ರಿಯ ಮಲ್ಲಿಕ್ ಅವರನ್ನು ಬಂಧಿಸಿದೆ. ಇಂದು ಮಲ್ಲಿಕ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಆದರೆ ಅದಕ್ಕೂ ಮುನ್ನ ಇಂದು ಬೆಳಗ್ಗೆ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.