ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್ ಒಬ್ಬ ತಲೆ ತಿರುಕ. ಆದ್ದರಿಂದ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ನಾನು ಬಸವೇಶ್ವರರ ಉತ್ತರಾಧಿಕಾರಿ ಎಂದು ಸಚಿವ ಪಾಟೀಲ್ ನೀಡಿದ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಇಂತಹ ಬಾಲಿಶ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಲಾರೆ ಎಂದು ತಿರುಗೇಟು ನೀಡಿದ್ದಾರೆ. ಬಿಜೆಪಿ ಪಕ್ಷದ ಹೈಕಮಾಂಡ್ ಉತ್ತರ ಕರ್ನಾಟಕದಲ್ಲಿ ಸ್ಪರ್ಧಿಸುವಂತೆ ಸೂಚನೆ ನೀಡಿದೆ. ಅದರಂತೆ, ವಿಜಯಪುರ ಅಥವಾ ಬಾಗಲಕೋಟೆಯಲ್ಲಿ ಚುನಾವಣೆಗೆ