ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ತನ್ನ ಬಾಹುಗಳನ್ನು ಚಾಚುತ್ತಿರೋ ಸಂದರ್ಭದಲ್ಲಿ ಲಾಕ್ ಡೌನ್ ಮುಂದುವರಿಸಲು ಚಿಂತನೆ ನಡೆದಿದೆ ಅಂತ ಸಚಿವರೊಬ್ಬರು ಹೇಳಿದ್ದಾರೆ. ರಾಜ್ಯದ ಕೆಲವು ಜಿಲ್ಲೆಗಳನ್ನು ಕೋವಿಡ್ – 19 ಕೇಸ್ ಗಳು ಹೆಚ್ಚಿರುವುದರಿಂದಾಗಿ ರೆಡ್ ಝೋನ್ ಎಂದು ಗುರುತಿಸಲಾಗಿದೆ. ಹೀಗೆ ಗುರುತಿಸಲಾದ ರೆಡ್ ಝೋನ್ ಗಳಲ್ಲಿ ಲಾಕ್ ಡೌನ್ ಇನ್ನೂ ಒಂದಷ್ಟು ದಿನಗಳ ಕಾಲ ಮುಂದುವರಿಸಲು ಚಿಂತನೆ ನಡೆಯುತ್ತಿದೆ. ಹೀಗಂತ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.