ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಪುನರಚನೆ ಬಗ್ಗೆ ಚರ್ಚೆ ತೀವ್ರಗೊಂಡಿದೆ. ಈ ನಡುವೆ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದು, ಸಿ ಪಿ ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡೋದು ಫಿಕ್ಸ್ ಎಂದು ಖಡಕ್ ಆಗಿ ಸ್ಪಷ್ಟನೆ ನೀಡಿದ್ದಾರೆ. ಸಚಿವ ಸ್ಥಾನಗಳಿಗಾಗಿ ಮೂಲ ಹಾಗೂ ವಲಸಿಗರು ಎನ್ನುವ ಪರ ವಿರೋಧ ಬಿಜೆಪಿಯಲ್ಲಿ ಸದ್ದು ಮಾಡುತ್ತಿರುವಾಗಲೇ ಸಿಎಂ ನೀಡಿರುವ ಹೇಳಿಕೆ ಕೆಲವರಲ್ಲಿ ಅಸಮಧಾನಕ್ಕೆ ಕಾರಣವಾಗುತ್ತಿದೆ. ಸಿ.ಪಿ.ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡುವುದಕ್ಕೆ ಬಿಜೆಪಿಯಲ್ಲಿ