ಮಹತ್ವದ ಬೆಳವಣಿಗೆಯೊಂದರಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಸಾರ್ವಜನಿಕರ ಕ್ಷಮೆ ಕೇಳಿದ್ದಾರೆ. ಕಲಬುರಗಿ ಜಿಲ್ಲೆಯ ಹೇರೂರು (ಬಿ) ಗ್ರಾಮದಲ್ಲಿ ನಡೆಯಬೇಕಿದ್ದ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮಳೆಯಿಂದ ಮೂಂದೂಡಿದ್ದು ಅನಾನುಕೂಲವಾಗಿರುವುದಕ್ಕೆ ಸಾರ್ವಜನಿಕರ ಕ್ಷಮೆಯಾಚಿಸುತ್ತೇನೆ. ಮುಂದಿನ ಗ್ರಾಮವಾಸ್ತವ್ಯ ಎಲ್ಲಿ ಎನ್ನುವುದರ ಕುರಿತು ಜುಲೈ ಮೊದಲ ವಾರದಲ್ಲಿ ನಿರ್ಧರಿಸಲಾಗುವುದು ಎಂದು ಸಮಾಜಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದರು.ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮ ವಾಸ್ತವ್ಯದಲ್ಲಿ ಸಲ್ಲಿಸಬೇಕಾಗಿದ್ದ ಕಲಬುರಗಿ ಜಿಲ್ಲೆಯ 28