ದೇಶದ ವಿವಿಧ ರಾಜ್ಯಗಳಿಗೆ ಹೋಲಿಸಿದರೆ ಮಹಾಮಾರಿ ಕೋವಿಡ್-19 ಸೋಂಕು ರಾಜ್ಯದಲ್ಲಿ ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಸಾಧ್ಯವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಹೇಳಿದ್ದಾರೆ. ಸಚಿವ ಡಾ.ಕೆ.ಸುಧಾಕರ್ ಮಾತನಾಡಿದ್ದು, ರಾಜ್ಯದಲ್ಲಿ ಒಟ್ಟಾರೆ ಇದುವರೆಗೂ 520 ಪ್ರಕರಣಗಳು ದಾಖಲಾಗಿವೆ. ಆ ಪೈಕಿ 198 ಮಂದಿ ಈಗಾಗಲೇ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. 20 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 300 ಪ್ರಕರಣಗಳು ಸಕ್ರಿಯ ಪ್ರಕರಣಗಳು ಇವೆ ಎಂದರು.ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 18 ಸೋಂಕಿತರ ಪೈಕಿ ಇಬ್ಬರು ಮೃತ ಪಟ್ಟಿದ್ದಾರೆ.